ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಬ್ಯಾಂಕ್ ಮ್ಯಾನೇಜರ್ ನನ್ನು ಉಗ್ರರ ಗುಂಪು ಗುಂಡಿಟ್ಟು ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ.
ಇಲ್ಲಿನ ಅರೆಹ್ ಮೋಹನ್ ಪೋರಾದಲ್ಲಿರುವ ಎಲ್ಲಕಿ ದೇಹತಿ ಬ್ಯಾಂಕ್ ಮೇಲೆ ದಾಳಿ ನಡೆಸಿರುವ ಉಗ್ರರ ಗುಂಪು ಮ್ಯಾನೇಜರ್ ವಿಜಯ್ ಕುಮಾರ್ ಅವರ ಮೇಲೆ ಫೈರಿಂಗ್ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಕುಮಾರ್ ಅವರನ್ನು ಆಸ್ಪತ್ರೆಗೆ ಸೇರಿಸುವ ವೇಳೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಉಗ್ರರ ಗುಂಡೇಟಿಗೆ ಬಲಿಯಾದ ಬ್ಯಾಂಕ್ ಮೇನೇಜರ್ ರಾಜಸ್ಥಾನದ ಹನುಮಾನ್ ಗಢ ನಿವಾಸಿಯಾಗಿದ್ದಾರೆ.
ಕಳೆದ ವಾರ ಕುಲ್ಗಾಮ್ ನಲ್ಲಿ ಉಗ್ರರು ಶಿಕ್ಷಕಿಯೊಬ್ಬರನ್ನು ಶಾಲೆ ಒಳಗಡೆಗೆ ಗುಂಡಿಟ್ಟು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಬ್ಯಾಂಕ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಬಿಜೆಪಿ ಸೇರ್ಪಡೆ ಬಗ್ಗೆ ಅಧಿಕೃತವಾಗಿ ಘೋಷಿಸಿದ ಹಾರ್ದಿಕ್ ಪಟೇಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ