ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಜಮ್ಮು-ಕಾಶ್ಮೀರದಲ್ಲಿ ಎನ್ಸಿ-ಕಾಂಗ್ರೆಸ್ ಮೈತ್ರಿಕೂಟ ಗೆಲುವು ಸಾಧಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲ, ಜಮ್ಮು-ಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಂದು ಘೋಷಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಹಾಗೂ ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಫಾರ್ಖ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮುಂದಿನ ಸಿಎಂ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ