*ಬೆಳಗಾವಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಸಂಭವಿಸಿದ ಸೇನಾ ವಾಹನ ಭೀಕರ ಅಪಘಾತದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ರಾಜಕ್ಕೆ ಆಗಮಿಸಿದೆ. ಬೆಳಗಾವಿಯ ಇಬ್ಬರು ಯೋಧರ ಮೃತದೇಹ ಬೆಳಗಾವಿಗೆ ಆಗಮಿಸಿದ್ದು, ಉಡುಪಿಯ ಓರ್ವ ಯೋಧನ ಮೃತದೇಹ ಉಡುಪಿಯ ಕುಂದಾಪುರಕ್ಕೆ ಆಗಮಿಸಿದೆ. ಇಂದು ಹುತಾತ್ಮ ಯೋಧರ ಅಂತ್ಯಕ್ರಿಯೆಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಬೆಳಗಾವಿಯ ಇಬ್ಬರು ಯೋಧರಾದ ದಯಾನಂದ್ ತಿರುಕನ್ನವರ್ ಹಾಗೂ ಮಹೇಶ್ ಮಾರಿಗೊಂಡ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮರಾಠಾ ರೆಜಿಮೆಂಟ್ ಗೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೂಡ ಮರಾಠಾ ರೆಜಿಮೆಂಟ್ ಗೆ ಆಗಮಿಸಿ ಹುತಾತ್ಮ ಯೋಧರಿಬ್ಬರಿಗೂ ಅಂತಿಮ ನಮನ ಸಲ್ಲಿಸಿದರು.
ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಒಟ್ಟು ಐವರು ಯೋಧರು ಸಾವನ್ನಪ್ಪಿದ್ದಾರೆ. ಅವರಲ್ಲಿ ಮೂವರು ಯೋಧರು ಕರ್ನಾಟಕದವರಾಗಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೆಳಗಾವಿಯ ಸಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ್ (45), ಉಡುಪಿ ಜಿಲ್ಲೆಯ ಕುಂದಾಪುರ ಬಳಿಯ ಕೋಟೇಶ್ವರದ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಎಂದು ಗುರುತಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ