LatestNational

*ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ಬಹುಮಾನ: ಕಾಶ್ಮೀರ ಪೊಲೀಸರಿಂದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 28 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಚುರುಕುಗೊಂಡಿದೆ. ಇದೇ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ನಗದು ಹಣ ಬಹುಮಾನ ಘೊಷಿಸಿದ್ದಾರೆ.

ಉಗ್ರರ ಬಗ್ಗೆ ಮಾಹಿತಿ ನೀಡಿದರೆ 20 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಶಂಕಿತ ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ ಈ ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಯಾವುದೇ ಮಾಹಿತಿಗಳಿದ್ದಲ್ಲಿ ಅನಂತ್ ನಾಗ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆ ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.

ಎಸ್ ಪಿ ಅನಂತ್ ನಾಗ್: 9596777666, ಪಿಸಿಆರ್ ಅನಂತ್ ನಾಗ್ :9596777669 ಇ-ಮೇ: dpoanantnag-jk2nic.inಗೆ ಮಾಹಿತಿ ನೀಡಬಹುದು ಎಂದು ಕೋರಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button