
ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ವಾಕಿಂಗ್ ಗೆ ಹೋಗುತ್ತಿದ್ದ ಬಿಜೆಪಿ ನಾಯಕನ ಮೇಲೆ ಉಗ್ರರು ಭೀಕರ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.
ಮೃತ ಬಿಜೆಪಿ ನಾಯಕನನ್ನು ಅಬ್ದುಲ್ ಹಮೀದ್ ನಜರ್(38) ಎಂದು ಗುರುತಿಸಲಾಗಿದ್ದು, ಇವರು ಬುದ್ಗಾಮ್ ಜಿಲ್ಲೆಯ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾಗಿದ್ದಾರೆ.
ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೇಳೆ ನಜರ್ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಶ್ರೀನಗರದ ಎಸ್‍ಹೆಚ್‍ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಜರ್ ಮೃತಪಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ