National

*ಸೈನಿಕರ ವೇಷದಲ್ಲಿ ಬಂದು ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಪ್ರವಾಸಿಗರು ಸಾವು*

ಪ್ರಗತಿವಾಹಿನಿ ಸುದ್ದಿ: ಸೈನಿಕರ ವೇಷದಲ್ಲಿ ಬಂದು ಉಗ್ರರು ಪ್ರವಾಸಿಗರ ಮೇಲೆ ಗುಂಡಿ ದಾಳಿ ನಡೆಸಿದ್ದು, ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ಸೇನೆ ಸಮವಸ್ತ್ರ ಧರಿಸಿ ಬಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ೧೨ ಜನರು ಗಾಯಗೊಂಡಿದ್ದಾರೆ.

ಘಟನೆ ಬೆನ್ನಲ್ಲೇ ಭಾರತೀಯ ಸೇನೆ ಇಡೀ ಪಹಾಲ್ಗಮ್ ಪ್ರದೆಶ ಸುತ್ತುವರೆದು ಉಗ್ರರಿಗಾಗಿ ಶೋಧ ಕಾರ್ಯನಡೆಸಿದೆ. ಈ ದಾಳಿಯ ಹೊಣೆಯನ್ನು ಟಿಆರ್ ಎಫ್ ಉಗ್ರಸಂಘಟನೆ ಹೊತ್ತುಕೊಂಡಿದೆ. ಉಗ್ರರ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button