Latest

ಮೂವರು ಉಗ್ರರು ಎನ್ ಕೌಂಟರ್ ಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್, ಇಬ್ಬರು ನಾಗರಿಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರ ಮುದಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯಲಾಗಿದೆ.

ಸೋಪೋರ್ ಜಿಲ್ಲೆಯ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಮುದಸಿರ್ ಹಾಗೂ ಪಾಕಿಸ್ತಾನ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಸೇರಿದಂತೆ ಮೂವರನ್ನು ಸದೆಬಡೆಯಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಉಚಿತ ಲಸಿಕೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button