
ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಜಮ್ಮು-ಕಾಶ್ಮೀರದ ಚಿನ್ಗಂ ಬಳಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನೆಯ 01 ಆರ್‍ಆರ್ ಹಾಗೂ ಜಮ್ಮು ಕಾಶ್ಮಿರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಉಗ್ರರ ಅಡುಗುದಾಣವನ್ನು ಸುತ್ತುವರಿದು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಸೇನೆ ನಡುವೆ ಗುಂಡಿನ ಚಕಮಕಿ ನಡೆಯಿತು.
ಈ ವೇಳೆ ಭದ್ರತಾ ಪಡೆ ನಡೆಸಿದ ಎನೌಕೌಂಟರ್ ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಆದರೆ ಉಗ್ರರ ಗುರುತು ಪತ್ತೆಯಾಗಿಲ್ಲ, ಕಾರ್ಯಾಚಾರಣೆ ಇನ್ನೂ ಮುಂದುವರೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ