ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ 12 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ದೆಹಲಿ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ವೈಷ್ಣೋದೇವಿ ಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಜಮ್ಮು-ಕಾಶ್ಮೀರ ಸರ್ಕಾರ ಉನ್ನತ ತನಿಖೆಗೆ ಆದೇಶಿಸಿದೆ. ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದೆ.
ದುರಂತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಭಕ್ತರು ಮೃತಪಟ್ಟಿರುವುದು ಅತೀವ ದು:ಖ ತಂದಿದೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
9 ತಿಂಗಳ ಬಳಿಕ ಮತ್ತೆ ದಿಢೀರ್ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ವ್ಯಾಪಕವಾಗಿ ಹರಡುತ್ತಿದೆ ರೂಪಾಂತರಿ ವೈರಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ