ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕನ್ನಡ, ತೆಲುಗು, ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ಜನಪ್ರಿಯತೆ ಪಡೆದಿದ್ದ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಹೈದರಾಬಾದ್ ನ ಸ್ವಗೃಹದಲ್ಲಿ ಜಮುನಾ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 1936ರಲ್ಲಿ ಹಂಪಿಯಲ್ಲಿ ಜನನಿಸಿದ್ದ ಜಮುನಾ ಗುಂಟೂರಿನ ದಿಗ್ಗಿರಾಲದಲ್ಲಿ ಬಾಲ್ಯದ ದಿನಗಳನ್ನು ಕಳೆದಿದ್ದರು. ಚಿಕ್ಕಂದಿನಿಂದಲೂ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಜಮುನಾ 1953ರಲ್ಲಿ ತೆಲುಗಿನ ಪುಟ್ಟಿಲ್ಲು ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.
ಚಿತ್ರರಂಗದ ಜತೆ ರಾಜಕೀಯದಲ್ಲಿಯೂ ಗುರುತಿಸಿಕೊಂಡಿದ್ದ ಜಮುನಾ 190ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಕನ್ನಡದಲ್ಲಿ ಡಾ.ರಾಜ್ ಕುಮಾರ್ ಅಭಿನಯದ ಸಾಕ್ಷಾತ್ಕಾರ, ಭೂ ಕೈಲಾಸ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ತೆಲುಗಿನ ಬಂಗಾರು ಪಾಪ, ದೊಂಗ ರಾಮುಡು, ಗುಂಡಮ್ಮ ಕಥ, ಶ್ರೀಕೃಷ್ಣ ತುಲಾಭಾರಂ, ತೆನಾಲಿ ರಾಮಕೃಷ್ಣ, ಮಾ ಇಮ್ಟಿ ಮಹಾಲಕ್ಷ್ಮಿ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಎನ್ ಟಿ ಆರ್, ನಾಗೇಶ್ವರ್ ರಾವ್, ಜಗ್ಗಯ್ಯ ಸೇರಿದಂತೆ ತೆಲುಗಿನ ಸ್ಟಾರ್ ನಟರ ಚಿತ್ರಗಳಲ್ಲಿ ಅಭಿನಯಿಸಿ ಜನಮೆಚ್ಚುಗೆ ಗಳಿಸಿದ್ದರು.
ಹಿರಿಯ ನಟಿಯ ಅಗಲಿಕೆಗೆ ಕನ್ನಡ, ತೆಲುಗು ಚಿತ್ರರಂಗ ಕಂಬನಿ ಮಿಡಿದಿದೆ. ಹೈದರಾಬಾದ್ ಫಿಲ್ಮ್ ಚೇಂಬರ್ ನಲ್ಲಿ ಜಮುನಾ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
*ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಗೌರವ; ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ*
https://pragati.taskdun.com/s-m-krishnapadmavibhushanacm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ