
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಶಾಸಕ ಅಭಯ ಪಾಟೀಲ ಪ್ರತಿವರ್ಷ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಈ ಬಾರಿ ಜನೆವರಿ 18ರಿಂದ 21ರ ವರೆಗೆ ನಡೆಯಲಿದೆ.
ನಗರದ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ಉತ್ಸವ ನಡೆಯುವುದು. ರಾಜ್ಯ, ರಾಷ್ಟ್ರವಷ್ಟೇ ಅಲ್ಲದೆ, ಹಲವಾರು ದೇಶಗಳ ಗಾಳಿಪಟ ಹಾರಾಟಗಾರರು ಉತ್ಸವದಲ್ಲಿ ಪಾಲ್ಗೊಳ್ಳುವರು.
ವರ್ಷದಿಂದ ವರ್ಷಕ್ಕೆ ಜನಪ್ರಿಯವಾಗುತ್ತಿರುವ ಗಾಳಿಪಟ ಉತ್ಸವದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುವರು. ಸಾವಿರಾರು ಸಂಖ್ಯೆಯಲ್ಲಿ ಶಾಲಾ ಮಕ್ಕಳು ಭಾಗವಹಿಸುವರು. ಮಕ್ಕಳಿಗಾಗಿ ಹಾಗೂ ಮಹಿಳೆಯರಿಗಾಗಿಯೇ ಒಂದೊಂದು ದಿನ ಪ್ರತ್ಯೇಕ ಕಾರ್ಯಕ್ರಮವನ್ನೂ ಆಯೋಜಿಸಲಾಗುತ್ತದೆ.
ಈ ಹಿಂದೆ ಸಾವಗಾಂವ್ ರಸ್ತೆ ಪಕ್ಕದ ಗುಡ್ಡದ ಮೇಲೆ ಉತ್ಸವ ಆಯೋಜಿಸಲಾಗುತ್ತಿತ್ತು. ಆದರೆ ಅಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿಶಾಲ ಮೈದಾನದಲ್ಲಿ ಉತ್ಸವ ಆಯೋಜಿಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ