Kannada NewsKarnataka NewsLatestPolitics
*ಮರಳಿ ಬಿಜೆಪಿಗೆ ಜನಾರ್ಧನ ರೆಡ್ಡಿ; ಕೆಆರ್ ಪಿಪಿ ವಿಲೀನಕ್ಕೆ ನಿರ್ಧಾರ?*

ಪ್ರಗತಿವಾಹಿನಿ ಸುದ್ದಿ; ಮಾಜಿ ಸಚಿವ, ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಲೋಕಸಭಾ ಚುನಾವಣೆ ಬೆನ್ನಲ್ಲೇ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡುವ ಮೂಲಕ ಬಿಜೆಪಿಗೆ ಮರಳಲು ಸಿದ್ಧತೆ ನಡೆಸಿದ್ದಾರೆ.
ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಷರತ್ತುಗಳು ಇಲ್ಲದೇ ಜನಾರ್ಧನ ರೆಡ್ಡಿ ಬಿಜೆಪಿಗೆಸೇರಲು ನಿರ್ಧರಿಸಿದ್ದಾರೆ.
ಇಂದು ನಡೆದ ಕೆಆರ್ ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಾಳೆಯೇ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ