ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಗೆಲು ಸಾಧಿಸಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ KRPP ಅಭ್ಯರ್ಥಿ ಜನಾರ್ಧನ ರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಬಳ್ಳಾರಿಯಲ್ಲಿ ಕೆ ಆರ್ ಪಿಪಿ ಯಿಂದ ಕಣಕ್ಕಿಳಿದಿದ್ದ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಪರಾಭವಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಶೇಖರ್ ರೆಡ್ಡಿ ವಿರುದ್ಧ ಸೋಲನುಭವಿಸಿದ್ದಾರೆ.
ಕೆಆರ್ ಪಿಪಿ ಪಕ್ಷ ಗೆಲುವಿನ ಖಾತೆ ತೆರೆದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾದಿದ ಜನಾರ್ಧನ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಗಂಗಾವತಿಯಲ್ಲಿ ನಾನು ಗೆಲುವು ಸಾಧಿಸಿದ್ದೇನೆ. ಮತ್ತೊಮ್ಮೆ ವಿಧಾನಸೌಧಕ್ಕೆ ಪ್ರವೇಶಿಸುತ್ತೇನೆ. ಆದರೆ ಗೆದ್ದ ಸಂಭ್ರಮದಲ್ಲಿ ನಾನಿಲ್ಲ, ಕಾರಣ ನನ್ನ ಪತ್ನಿ ಅರುಣಾ ಲಕ್ಷ್ಮಿ ಬಳ್ಳಾರಿಯಲ್ಲಿ ಸೋತಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ಅವರು ಬಳ್ಳಾರಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ನಡೆಸಿದ್ದರು. ಸಾಕಷ್ಟು ಪರಿಶ್ರಮ ಪಟ್ಟ ಹೊರತಾಗಿಯೂ ಗೆಲುವು ಸಾಧ್ಯವಾಗಿಲ್ಲ ಎಂಬ ಬೇಸರದಲ್ಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಗೆ ರಾಜ್ಯದ ಜನ ತಕ್ಕ ಪಾಠ ಕಲಿಸಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಇದಕ್ಕೆ ಕಾರಣ ಬಿಜೆಪಿ ನಾಯಕರ ನಿರ್ಧಾರಗಳು, ಘಟಾನುಘಟಿ, ಹಿರಿಯ ನಾಯಕರನ್ನು ನಡೆಸಿಕೊಂಡ ರೀತಿ ಇದೆಲ್ಲದಕ್ಕೂ ಜನ ಇಂದು ಫಲಿತಾಂಶದ ಮೂಲಕ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ