Karnataka NewsLatestPolitics
*ತನಗೆ ಹಾಗೂ ಕುಟುಂಬಕ್ಕೆ Z ಶ್ರೇಣಿಯ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ಜನಾರ್ಧನ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ನಡೆದ ಗಲಾಟೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಭದ್ರತೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.
ಬಳ್ಳಾರಿ ಗಲಾಟೆ ಬಳಿಕ ಶಾಸಕ ಜನಾರ್ಧನ ರೆಡ್ಡಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಝಡ್ ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಐಡಿ-ಐಜಿಪಿ ಡಾ.ಸಲೀಮ್ ಅವರಿಗೆ ಪತ್ರ ಬರೆದಿದ್ದಾರೆ.
ಶಾಸಕ ಭರತ್ ರೆಡ್ಡಿ ಹಾಗೂ ಸತೀಶ್ ರೆಡ್ಡಿಯನ್ನು ಬಂಧಿಸಬೇಕು. ಘಟನೆ ನಿಭಾಯ್ಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನನಗೆ ಭದ್ರತೆ ನೀಡದಿದ್ದರೆ ಮುಂದೆ ನನ್ನ ಹಾಗೂ ನನ್ನ ಕುಟುಂಬದ ಮೇಲೆ ದಾಳಿಯಾದರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಪತ್ರದಲ್ಲಿ ಜನಾರ್ಧನ ರೆಡ್ಡಿ ಉಲ್ಲೇಖಿಸಿದ್ದಾರೆ.



