ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ, ಹೊಸ ಪಕ್ಷ ರಚನೆ ಮಡುವ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹೊಸ ಮನೆ ಖರೀದಿ ಮಾಡಿ ಗೃಹ ಪ್ರವೇಶ ಮಾಡುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿತ್ತು. ಈ ಎಲ್ಲಾ ಬೆಳವಣಿಗಳ ನಡುವೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮನವೊಲಿಕೆಯ ಯತ್ನವನ್ನೂ ಬಿಜೆಪಿ ನಡೆಸಿದೆ.
ಮಾಜಿ ಸಚಿವ ಜನಾರ್ಧನ ರೆಡ್ಡಿ ಬೆನ್ನಿಗೆ ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿಂತಿದ್ದಾರೆ. ಜನಾರ್ಧನ ರೆಡ್ಡಿಯನ್ನು ಬಿಜೆಪಿ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಜನಾರ್ಧನ ರೆಡ್ಡಿಯವರನ್ನು ನಿರ್ಲಕ್ಷ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲಿಯೇ ಅವರನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಗಂಗಾವತಿಯಲ್ಲಿ ಅವರು ಮನೆ ಮಾಡಿದ್ದರಿಂದ ಗೊಂದಲವಾಗಿದೆಯಷ್ಟೆ. ಈಗಾಗಲೇ ಜನಾರ್ಧನ ರೆಡ್ಡಿ ಅವರ ಜೊತೆ ನಾನ್ನು ಮಾತನಾಡಿ ಚರ್ಚೆ ನಡೆಸಿದ್ದೇನೆ. ಜನಾರ್ಧನ ರೆಡ್ದಿ ಸ್ಪರ್ಧೆಯ ಬಗ್ಗೆ ಪಕ್ಷ ನಿರ್ಧರಿಸುತ್ತದೆ ಎಂದು ಹೇಳಿದರು. ಈ ಮೂಲಕ ಹೊಸ ಪಕ್ಷ ರಚನೆಗೆ ಮುಂದಾಗಿದ್ದ ಜನಾರ್ಧನ ರೆಡ್ಡಿಯವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ರಾಜಾಹುಲಿ ಮೂಲಕ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.
*ಬಿಜೆಪಿಯಲ್ಲಿ ನನ್ನದೇ ಆದ ಶಕ್ತಿಯಿದೆ; ಮಾಜಿ ಸಿಎಂ ಯಡಿಯೂರಪ್ಪ ಖಡಕ್ ಮಾತು*
https://pragati.taskdun.com/b-s-yedyurappareactionj-p-naddakoppala-programme/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ