*ಶೆಟ್ಟರ್ ಬಳಿಕ ಜನಾರ್ಧನ ರೆಡ್ಡಿಗೂ ಬಿಜೆಪಿ ಗಾಳ; ಮತ್ತೆ ಕಮಲದತ್ತ ಮುಖ ಮಾಡ್ತಾರಾ ಮಾಜಿ ಸಚಿವ?*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಬೆನ್ನಲ್ಲೇ ಹಲವು ನಾಯಕರನ್ನು ಪಕ್ಷಕ್ಕೆ ವಾಪಾಸ್ ಕರೆತರುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಯತ್ನಿಸಿದ್ದು, ಇದೀಗ ಮಾಜಿ ಸಚಿವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೂ ಗಾಳ ಹಾಕಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕರೂ ಆಗಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅವರಿಗೆ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸುವಂತೆಯೂ ಕೋರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಕ್ಷ ವಿಲೀನದ ಬಗ್ಗೆ ಜನಾರ್ಧನ ರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಕೊಪ್ಪಳ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕಾರ ನೀಡಲು ಒಲವು ತೋರಿದ್ದಾರೆ ಎನ್ನಲಾಗಿದೆ. ಈ ನಡುವೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ, ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಬೇಕು. ಇಡೀ ವಿಶ್ವವೇ ತಿರುಗಿ ನೋಡುವ ಕೆಲಸವನ್ನು ಮೋದಿಯವರು ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ