Kannada NewsKarnataka NewsPolitics
*12 ವರ್ಷಗಳ ಬಳಿಕ ಬಿಜೆಪಿಗೆ ಮರು ಸೇರ್ಪಡೆಯಾದ ಗಾಲಿ ಜನಾರ್ಧನ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಕೆ ಆರ್ ಪಿಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.
ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಯಡಿಯೂರಪ್ಪ ಆಶಿರ್ವಾದ, ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು ಸಂತಸವಾಗಿದೆ ಎಂದು ಇದೇ ವೇಳೆ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.


