Latest

*ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಣೆ ಮೂಲಕ ರಾಜ್ಯ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಹೇಳಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೊಂದು ಸಂಕಷ್ತ ಎದುರಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆಸ್ತಿ ಜಪ್ತಿ ಅನುಮತಿಗೆ ವಿಳಂಬ ಧೋರಣೆ ಅನುಸರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟಗೆ ತೆಗೆದುಕೊಂಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ರಾಜ್ಯ ಗೃಹ ಇಲಾಖೆ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿ ಅದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿಯೇ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಜನಾರ್ಧನ ರೆಡ್ದಿ ಹೊಸದಾಗಿ ತೆಲಂಗಾಣ, ಆಂಧ್ರ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್ 30 ರಂದು ಸಿಬಿಐ ಪ್ರಾಸಿಕ್ಯೂಷನ್’ಗೆ ಮನವಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಈವರೆಗೆ ಅನುಮತಿ ನಿಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೊರೆ ಹೋಗಿತ್ತು. ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನಿದಲು ರಾಜ್ಯ ಸಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿತ್ತು. ಈ ಹಿನ್ನೆಲೆಅಲ್ಲಿ ಹೈಕೋರ್ಟ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಇದೀಗ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್ ಗೆ ಸರ್ಕಾರಿ ವಕೀಲರು ಮಾಹಿತಿ ನೀಡಿದ್ದಾರೆ.

*ಸಿದ್ದರಾಮಯ್ಯಗೆ ಶಕ್ತಿ ದೇವತೆ ನೀಡಿದ ಸಂದೇಶವೇನು? *

https://pragati.taskdun.com/vidhanasabha-electionsiddaramaiahchikkamma-devi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button