ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಷರತ್ತುಬದ್ಧ ಅನುಮತಿ ನೀಡಿ ಸುಪ್ರೀಂ ಕೊರ್ಟ್ ಆದೇಶ ಹೊರಡಿಸಿದೆ.
ಮಾಜಿ ಸಚಿವ ಜನಾರ್ಧನ ರೆಡ್ಡಿ 8 ವಾರಗಳ ಕಾಲ ಬಳ್ಳಾರಿಗೆ ಹೋಗಲು ಅನುಮತಿ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ.
ಜಾಮೀನು ಷರತ್ತು ಮಾರ್ಪಡಿಸಿರುವ ಸುಪ್ರೀಂ ಕೋರ್ಟ್ ನ ವಿನೀತ್ ಶರಣ್ ಪೀಠ, ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಅನುಮತಿ ನೀಡಿದ್ದು, ಹೊದಾಗಲೆಲ್ಲ ಎಸ್ ಪಿಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ