Politics

*ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಗಂಗಾವತಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷ ಜೈಲುಶಿಕ್ಷೆ ಅನುಭವಿಸಿ ಜಾಮೀನು ಮೇಲೆ ಹೊರಗಿರುವ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ಪ್ರವೇಶವಿಲ್ಲ ಎಂದು ನಿರ್ಬಂಧ ವಿಧಿಸಿತ್ತು. ಇದೀಗ 9 ವರ್ಷಗಳ ಬಳಿಕ ಜನಾರ್ಧನ ರೆಡ್ಡಿಯವರಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ತೆರವುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಈ ಹಿಂದೆ ಜನಾರ್ಧನ ರೆಡ್ಡಿ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಾಮೀನು ನೀಡುವ ವೇಳೆ ಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ನ್ಯಾ.ಎಂ.ಎಂ ಸುಂದರೇಶ್ ನೇತೃತ್ವದ ದ್ವಿಸದಸ್ಯ ಸುಪ್ರೀಂ ಕೋರ್ಟ್ ಪೀಠ, ಈ ಆದೇಶ ತೆರವುಗೊಳಿಸಿದ್ದು, ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದೆ.

ಜನಾರ್ಧನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುತ್ತಿದ್ದಂತೆ ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಅಭಿಮಾನಿಗಳು, ಸಿಹಿ ಹಂಚಿ ಕುಣಿದು ಸಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button