Kannada NewsKarnataka NewsLatest

*RSSಗೆ ಕಾಂಗ್ರೆಸ್ ಸರ್ಕಾರದಿಂದ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್. ಎಸ್ ಎಸ್ ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ.

ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಜನಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ 35.33 ಎಕರೆ ಭೂಮಿ ಹಸಾಂತರಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ತಾವರೆಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಇದನ್ನು ತಡೆ ಹಿಡಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ಜನಸೇವಾ ವಿದ್ಯಾಕೇಂದ್ರ ನ್ಯಾಯಬದ್ಧವಗೈ ಕೆಲಸ ಆಡುತ್ತಿದೆ. ನಾನೂ ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಈಗ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದ ಯೋಜನೆಗಳಿಗೂ ತಡೆ ಹಿಡಿದಿರುವುದಲ್ಲದೇ ಮಂಜೂರಾಗಿರುವ ಭೂಮಿ ಹಸ್ತಾಂತರಕ್ಕೂ ತಡೆ ನೀಡಿದೆ. ಈ ಸರ್ಕಾರ ಯಾವ ಹಾದಿಯಲ್ಲಿ ಸಾಗುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Home add -Advt


Related Articles

Back to top button