Latest

ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಕಟ್ಟಿದ್ದೇಕೆ? : ಡಿಕೆಶಿ ಗುಡುಗು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಯಾಕೆ ಮಾಡಿದ್ದೇವೆ ಎಂಬುದನ್ನೇ ಸರ್ಕಾರ ಮರೆತಿದೆ. ಹೀಗಾಗಿ ಅಲ್ಲಿಯೇ ಬಜೆಟ್ ಅಧಿವೇಶ ಮಾಡುವಂತೆ ಒತ್ತಾಯಿಸಿದ್ದೇವೆ. ಆದರೆ ಬಜೆಟ್ ಅಧಿವೇಶನ ಬಳಿಕ ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು.

Home add -Advt

ಇನ್ನು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ. ಕೊರೊನಾ ಸಂದರ್ಭದಲ್ಲಿ ಆದ ನಷ್ಟಕ್ಕೆ ಪರಿಹಾರ ಸಿಗುವ ಲಕ್ಷಣವೂ ಕಾಣುತ್ತಿಲ್ಲ ಉಳಿದ ವಿಚಾರ ಮತ್ತೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

Related Articles

Back to top button