ನಾಳೆ ಮನೆಯಿಂದ ಹೊರಬಂದರೆ ಕೇಸ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್ ಮುಂಜಾಗೃತಾ ಕ್ರಮವಾಗಿ ನಾಳೆ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಗೆ ಪ್ರಧಾನಿ ಮೋದಿ ಕರೆ ನೀದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ವಾಕಿಂಗ್, ಕಾರ್ಯಕ್ರಮ, ಪ್ರವಾಸ ಎಂದು ಮನೆಯಿಂದ ಹೊರಬರುವಂತಿಲ್ಲ. ಒಂದೊಮ್ಮೆ ಹೊರ ಬಂದು ರಸ್ತೆಯಲ್ಲಿ ಓಡಾಡಿದರೆ ಅವರ ವಿರುದ್ಧ ಆಕ್ಟ್ 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್, ಬೆಂಗಳೂರಿನಲ್ಲಿ ಎಲ್ಲಾ ಕಡೆ ಬ್ಯಾರಿಕೇಡ್‍ಗಳನ್ನು ಹಾಕಿ ಪೊಲೀಸರು ಗಸ್ತು ತಿರುಗುತ್ತಿರುತ್ತಾರೆ. ಹೊರಗಡೆ ಇರುವ ಪ್ರತಿಯೊಬ್ಬ ಸಿಬ್ಬಂದಿಗೂ ಮಾಸ್ಕ್ , ಸ್ಯಾನಿಟೈಸರ್ ಕೊಡ್ಬೇಕು ಅಂತ ಹೇಳಿದ್ದೇವೆ. ಈ ಕುರಿತು ಎಲ್ಲಾ ಡಿಸಿಪಿಗಳಿಗೆ ಈಗಾಗ್ಲೇ ಸಭೆ ನಡೆಸಿ ಸೂಚನೆ‌ ನೀಡಿದ್ದೇನೆ. ಇನ್ನೂ ಪೊಲೀಸ್ ಇಲಾಖೆ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಜೊತೆ ಮಾತುಕತೆ ನಡೆಸಿದ್ದೇವೆ. ಸೊಂಕಿತರು ವಿಷಯ ಮುಚ್ಚಿಡುತ್ತಿರುವುದು ಬೆಳಕಿಗೆ ಬಂದಿದೆ. ಇಂತವರ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ವೈರಸ್ ಹಬ್ಬುತ್ತಿರುವ ಇಂತಹ ಸಮಯದಲ್ಲಿ ಜನರು ತಮ್ಮಷ್ಟಕ್ಕೆ ತಾವೇ ಕರ್ಫ್ಯೂ ವಿಧಿಸಿಕೊಳ್ಳಬೇಕು. ಈ ಮೂಲಕ ಮಾರಕ ಸೋಂಕು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಇದೇ ಮಾರ್ಚ್ 22ರ ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ದೇಶದ ಪ್ರತಿಯೊಬ್ಬರು ಜನತಾ ಕರ್ಫ್ಯೂ ಪಾಲಿಸಬೇಕು. ಈ ಸಮಯದಲ್ಲಿ ಯಾರೊಬ್ಬರೂ ಕೂಡ ತಮ್ಮ ಮನೆಯಿಂದ ಹೊರಗೆ ಬರಬಾರದು ಎಂದು ಕರೆ ನೀಡಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button