Latest

*ಚುನಾವಣೆ ಮುಗಿಯುವವರೆಗಷ್ಟೇ ಅಲ್ಲಿ ಸನ್ಮಾನ; ಕಾಂಗ್ರೆಸ್ ನದ್ದು ಯೂಸ್ & ಥ್ರೋ ಸಂಸ್ಕೃತಿ ಎಂದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಲಿಂಗಾಯಿತರ ಬಗ್ಗೆ ಪ್ರೀತಿ ಬಂದಿದೆ. ಚುನಾವಣೆ ಮುಗಿಯುವವರೆಗಷ್ಟೇ ಅವರ ಸನ್ಮಾನ ನಂತರ ಅವಮಾನ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಾಗಿದೆ. ಇದರಲ್ಲಿ ಅನುಮಾನವೇ ಇಲ್ಲ. ಅವರಾಗಿಯೇ ಪಕ್ಷ ಬಿಟ್ಟು ಹೋಗಿದ್ದಾರೆ. ಶೆಟ್ಟರ್ ವಿರುದ್ಧ ಷಡ್ಯಂತ್ರ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.

ಕಾಂಗ್ರೆಸ್ ಸಂಸ್ಕೃತಿ ಯೂಸ್ & ಥ್ರೋ ಸಂಸ್ಕೃತಿ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಅರಸು, ವಿರೇಂದ್ರ ಪಾಟೀಲ್ ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್. ಚುನಾವಣೆ ಮುಗಿಯುವವರೆಗೆ ಸನ್ಮಾನ ಮಾಡ್ತಾರೆ. ಬಳಿಕ ಇಲ್ಲಿಂದ ಹೋದವರಿಗೆ ಅವಮಾನ ಮಾಡುತ್ತಾರೆ ಎಂದು ಗುಡುಗಿದರು.

Home add -Advt

ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿದ್ದಾರೆ. ಅವರು ಮತ್ತೆ ಪಕ್ಷಕ್ಕೆ ಬರುತ್ತಾರೆ ಎಂದು ನಿರೀಕ್ಷೆ ಮಾಡುವುದಿಲ್ಲ ಎಂದು ಹೇಳಿದರು.

https://pragati.taskdun.com/siddaramaiahreactionjagadish-shettarcongresss-join/

Related Articles

Back to top button