ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಾದ್ಯಂತ ಆತಂಕಕ್ಕೆ ಕಾರಣವಗಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತದಲ್ಲಿ ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ ಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಜನರು ಸ್ವಯಂಪ್ರೇರಣೆಯಿಂದ ಮನೆಯಲ್ಲೇ ಇರಲು ನಿರ್ಧರಿಸಿದ್ದಾರೆ.
ಜನತಾ ಕರ್ಫ್ಯೂ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಡೀ ಕರುನಾಡೇ ಸ್ತಬ್ಧವಾಗಿದ್ದು ಹೋಟೆಲ್, ಸಾರಿಗೆ, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ರೈಲು ಸೇವೆ ಕೂಡ ಸ್ತಬ್ಧಗೊಂಡಿದೆ.
ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜನರಿಲ್ಲದೇ ಖಾಲಿ ಖಾಲಿಯಾಗಿದೆ. ಬಿಎಂಟಿಸಿ ಬಸ್ ನಿಲ್ದಾಣ ಮತ್ತು ಕೆಎಸ್ಆರ್ಟಿಸಿ ನಿಲ್ದಾಣ ಕೂಡ ಸ್ತಬ್ಧವಾಗಿದೆ. ಮಾರ್ಕೆಟ್ಗಳು ಕೂಡ ಬಿಕೋ ಎನ್ನುತ್ತಿವೆ. ಎಂ.ಜಿ. ರೋಡ್, ಮೆಟ್ರೋ ನಿಲ್ದಾಣಗಳು ಕೂಡ ಖಾಲಿಯಾಗಿವೆ.ಕೆ.ಆರ್. ಮಾರ್ಕೆಟ್, ಯಶವಂತಪುರ ಮಾರ್ಕೆಟ್ ಸೇರಿದಂತೆ ಎಲ್ಲ ಮಾರ್ಕೆಟ್ಗಳೂ ಬಿಕೋ ಎನ್ನುತ್ತಿವೆ.
ಬೆಂಗಳೂರಿನ ಎಂ.ಜಿ ರಸ್ತೆ ಕೂಡ ಖಾಲಿಯಾಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರವೂ ಇಲ್ಲ. ಪಕ್ಕದ ಬ್ರಿಗೇಡ್ ರೋಡ್ ಸಹ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಬೆಳಗಿನ ವಾಕಿಂಗ್ ಮಾಡುವವರು ಕೂಡ ರೋಡ್ನಲ್ಲಿ ಕಾಣುತ್ತಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ