Kannada NewsKarnataka NewsLatest

*ಜಾನಪದ ಕಲಾವಿದ ಪುಟ್ಟಸ್ವಾಮಿ ಹೃದ್ರೋಗ ಚಿಕಿತ್ಸೆಗೆ ನೆರವು ನೀಡುವಂತೆ ಇಲಾಖೆ ನಿರ್ದೇಶಕರಿಗೆ ಸೂಚಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಪುಟ್ಟಸ್ವಾಮಿ ಅವರು ಹೃದ್ರೋಗ ಚಿಕಿತ್ಸೆಗಾಗಿ ನೆರವು ನೀಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದು, ತಕ್ಷಣ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ರಾಮಯ್ಯ ಇಂದು ಜನತಾದರ್ಶನ ಕಾರ್ಯಕ್ರಮ ನಡೆಸಿದ್ದು, ಈ ವೇಳೆ ಜಾನಪದ ಕಲಾವಿದ ಪುಟ್ಟಸ್ವಾಮಿ ಅವರು, ಹೃದ್ರೋಗ ಚಿಕಿತ್ಸೆಗಾಗಿ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಯವರು ಪುಟ್ಟಸ್ವಾಮಿ ಅವರಿಗೆ ನೆರವು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಸೂಚಿಸಿದರು.

ಇದೇ ವೇಳೆ ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗೆ ಸಿ.ಎ. ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ್ದಾರೆ. ಇದನ್ನು ಪಾವತಿಸಲು ಶಕ್ತರಿಲ್ಲದ ಕಾರಣ ಹಣ ಪಾವತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

Home add -Advt

ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಿಎಂ, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button