ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 11 ತಿಂಗಳ ಕಂದಮ್ಮನನ್ನು ಕಾಡುತ್ತಿರುವ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಗೆ ಚಿಕಿತ್ಸೆಗಾಗಿ 16 ಕೋಟಿ ರೂ. ಇಂಜಕ್ಷನ್ ಅಗತ್ಯವಿದ್ದು, ಈ ಚುಚ್ಚು ಮದ್ದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಮನವಿ ಮಾಡಿದ್ದು, ಔಷಧದ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನ ಮಾಡುವಂತೆಯೂ ಕೋರಿದ್ದಾರೆ.
ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಜೆ.ಸಿ.ಚಂದ್ರಶೇಖರ್ ಪತ್ರದ ಪ್ರತಿ ರವಾನಿಸಿದ್ದಾರೆ.
ಕರ್ನಾಟಕದಲ್ಲೂ16 ಕೋಟಿ ರೂ. ಖಾಯಿಲೆಯ ಮಗು; ಸಹಾಯಕ್ಕಾಗಿ ಹೆತ್ತವರ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ