Kannada NewsLatestNational

*ಬೇಡಿಕೆ ಈಡೇರಿಸಲು ಒಪ್ಪಿದ ಕೇಂದ್ರ ಸರ್ಕಾರ: ಜಂತರ್-ಮಂತರ್ ನಲ್ಲಿ CJP ಪ್ರತಿಭಟನೆ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ನೀಟ್ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯಗೊಂಡಿದೆ.

ದೆಹಲಿಯ ಜಂತರ್-ಮಂತರ್ ನಲ್ಲಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿರುವುದಾಗಿ ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಿಸಿದ್ದಾರೆ. ಕೇಂದ್ರ ಸರ್ಕಾಅರದ ಸಚಿವರುಗಳು ಹಾಗೂ ಸಿಜೆಪಿ ನಾಯಕರ ಮೂರನೇ ಸುತ್ತಿನ ಮಾತುಕತೆ ಬಳಿಕ ಈ ವಿಷಯ ತಿಳಿಸಿದರು.

ಕೇಂದ್ರ ಸಚಿವ ಜೆ.ಪಿ.ನಡ್ಡಾ, ಜಿತೇಂದ್ರ ಸಿಂಗ್ ಹಾಗೂ ಸಿಜೆಪಿ ವಕ್ತಾರರಾದ ಆಶಿತೋಷ್ ರಂಕಾ, ಸೌರವ್ ದಾಸ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ಸೌರವ್ ದಾಸ್, ನಮ್ಮ ಮೂರು ಬೇಡಿಕೆಯಂತೆ ಈಗಾಗಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾಅನ್ ರಾಜೀನಾಮೆ ನೀಡಿದ್ದಾರೆ. ಉಳಿದ ಎರಡು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಳಿಸುವುದಾಗಿ ತಿಳಿಸಿದರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಿಂದ ನಮ್ಮ ಒಂದು ಬೇಡಿಕೆ ಈಡೇರಿದೆ. ಉಳಿದ ಎರಡು ಬೇಡೀಕೆಗಳಾದ ವಿದ್ಯಾರ್ಥಿಗಳ ಮೇಲಿನ ಎಫ್ ಐಆರ್ ಶೀಘ್ರ ರದ್ದಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಇನ್ನು ನೀಟ್ ಅಕ್ರಮಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಒಂದು ಕೋಟಿ ರೂ ಸಾಧ್ಯವಾಗದಿದ್ದರೂ ಹೆಚ್ಚಿನ ಪರಿಹಾರ ಸಾಧ್ಯವಾದಷ್ಟು ನೀಡುವುದಾಗಿ ಕೇಂದ್ರ ಸರ್ಕಾರ ಒಪ್ಪಿದೆ ಎಂದರುಹ್

ಈ ನಿಟ್ಟಿನಲ್ಲಿ ಜಂತರ್-ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಅಂತ್ಯವಾಗಲಿದೆ. ಎಲ್ಲಾ ವಿದ್ಯಾರ್ಥಿಗಳು ಮನೆಗಳಿಗೆ ತೆರಳುವಂತೆ ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button