ಪ್ರಗತಿವಾಹಿನಿ ಸುದ್ದಿ; ಟೊಕಿಯೋ: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಶಿಂಜೊ ಅಬೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಶಿಂಜೊ ಅಬೆ ಅವರ ಎದೆಯ ಭಾಗಕ್ಕೆ ಗುಂಡೇಟು ತಗುಲಿದೆ. ಗುಂಡೇಟಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾರಾ ನಗರದ ಬೀದಿಯಲ್ಲಿ ಶಿಂಜೊ ಅಬೆ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಭಾಷಣ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ