Latest

ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ; 27 ಜನರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಟೋಕಿಯೋ: ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27 ಜನರು ಸಾವನ್ನಪ್ಪಿರುವ ದಾರುಣ ಘಟನೆ ಜಪಾನ್ ನ ಒಸಾಕಾದಲ್ಲಿ ನಡೆದಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸಧ್ಯ ಬೆಂಕಿ ತಹಬದಿಗೆ ಬಂದಿದೆ. 8 ಅಂತಸ್ತಿನ ವಾಣಿಜ್ಯ ಕಟ್ಟಡ ಇದಾಗಿದ್ದು, ಕಟ್ಟಡದ ಹಲವು ಭಾಗ ಸುಟ್ಟು ಕರಕಲಾಗಿದೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಮಗಳ ಮದುವೆ ಮಾಡಿ 15 ದಿನದಲ್ಲಿ ಆತ್ಮಹತ್ಯೆಗೆ ಶರಣಾದ ಎಇಇ ಕುಟುಂಬ

Home add -Advt

Related Articles

Back to top button