Latest

ಕರ್ನಾಟಕ ಸರಕಾರ ಕೆಡವಿದ ಜಾರಕಿಹೊಳಿ ಮಹಾರಾಷ್ಟ್ರ ರಾಜಕಾರಣದಲ್ಲಿ ಮಧ್ಯಪ್ರವೇಶ

ಪಡ್ನವೀಸ್ –  ರಮೇಶ್ ಜಾರಕಿಹೊಳಿ‌  ಭೇಟಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ –  ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ಗೊಂದಲದ ಮಧ್ಯೆ, ಕರ್ನಾಟಕದಲ್ಲಿ ಸಮ್ಮಿಶ್ರ ಸರಕಾರ ಕೆಡವಿದ (ಕು)ಖ್ಯಾತಿ ಹೊಂದಿರುವ ರಮೇಶ ಜಾರಕಿಹೊಳಿ ಪ್ರವೇಶಿಸಿದ್ದಾರೆ.

ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ, ಇದಕ್ಕೆ ಪೂರಕವಾಗಿ ಕಂಗನಾ ರಣಾವತ್ ಪ್ರಕರಣ ಸೇರಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ತೀವ್ರ ಗೊಂದಲದಲ್ಲಿದ್ದಾರೆ. ಅಲ್ಲಿನ ಸರಕಾರವೇ ಇಕ್ಕಟ್ಟಿಗೆ ಸಿಲುಕುವ ಸ್ಥಿತಿಗೆ ತಲುಪಿದೆ.
 ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಈಗಾಗಲೆ ಮಹಾರಾಷ್ಟ್ರ ಸಮ್ಮಿಶ್ರ ಸರಕಾರದ ವಿರುದ್ಧ ತೀವ್ರ ಕಾರ್ಯಚರಣೆ ನಡೆಸುತ್ತಿದೆ.
ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್ ಮತ್ತು ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ನವದೆಹಲಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.
 ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆಪಿ‌ ನಡ್ಡಾ ಅವರ ಸೂಚನೆಯಂತೆ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ರಾಜಕಾರಣದಲ್ಲಿ ಮಧ್ಯಪ್ರವೇಶ ಮಾಡಿದ್ದಾರೆ ಎನ್ನಲಾಗಿದ್ದು, ನವದೆಹಲಿಯಲ್ಲಿ ಪಡ್ನವೀಸ್ ಜೊತೆ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಭಾಜಪ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ ರಮೇಶ್ ಜಾರಕಿಹೊಳಿ‌, ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಅಲ್ಲಿನ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಮಹಾರಾಷ್ಟ್ರದ ಸಮ್ಮಿಶ್ರ ಸರಕಾರವನ್ನು ಕೆಡವಲು ಸಂಚು ತಯಾರಾಗುತ್ತಿರುವ ಶಂಕೆ ವ್ಯಕ್ತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button