
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಾಂಗ್ರೆಸ್ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಜಿಲ್ಲಾ ನಾಯಕರು, ಎಲ್ಲ ಶಾಸಕರು ಸೇರಿ ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಒಮ್ಮತದಿಂದ ಆಯ್ಕೆ ಮಾಡಿದ್ದೇವೆ. ಒಬ್ಬ ಸೌಮ್ಯ ಮನೋಭಾವದ, ಎಲ್ಲ ವರ್ಗಗಳ ಬಗೆಗೆ ಕಾಳಜಿ ಹೊಂದಿರುವ, ಸಜ್ಜನ ವ್ಯಕ್ತಿಯನ್ನು ಕ್ಷೇತ್ರಕ್ಕೆ ಅಭ್ಯರ್ಥಿ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಸೋಮವಾರ ಸತೀಶ್ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಭಾನುವಾರವೇ ಬೆಳಗಾವಿಗೆ ಆಗಮಿಸಿರುವ ಶಿವಕುಮಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
25 ಜನರು ಲೋಕಸಭೆಗೆ ಆಯ್ಕೆಯಾದರೂ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಈಗ ಇರುವ ಒಬ್ಬರ ಜೊತೆಗೆ ಧ್ವನಿ ಎತ್ತಲು ಇನ್ನೊಬ್ಬರನ್ನು ಕಾಂಗ್ರೆಸ್ ಕಳಿಸಲಿದೆ. ಸತೀಶ್ ಜಾರಕಿಹೊಳಿ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್ ಗೆ ಕಾರಣವಾಗಲಿದೆ. ಬಿಜೆಪಿ ನುಡಿದಂತೆ ನಡೆಯಲಿಲ್ಲ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಾಗಾಗಿ ನಾವು ಬೆಳಗಾವಿಯಲ್ಲಿ ಸುಲಭವಾಗಿ ಗೆಲುವು ಸಾಧಿಸುತ್ತೇವೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರಡ್ಡಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇನ್ನಷ್ಟು ಸುದ್ದಿಗಳು –
ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್ – ಡಿ.ಕೆ.ಶಿವಕುಮಾರ
ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನದ ಮೇಲೆ ಕಲ್ಲು, ಚಪ್ಪಲಿ ಎಸೆದ ರಮೇಶ್ ಜಾರಕಿಹೊಳಿ ಬೆಂಬಲಿಗರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ