ಪ್ರಗತಿವಾಹಿನಿ ಸುದ್ದಿ; ರಾಂಚಿ: 17 ಜನ ಕಾಮುಕರು ಪತಿಯ ಮುಂದೆಯೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘೋರ ಕೃತ್ಯ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಪತಿಯ ಜೊತೆ ಸಂಜೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕಾಮುಕರು ಪತಿಯ ಮೇಲೆ ಹಲ್ಲೆ ನಡೆಸಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತ್ರಸ್ತ ಮಹಿಳೆಗೆ 5 ಜನ ಮಕ್ಕಳಿದ್ದಾರೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ