Latest

ಜೆಎಸ್‌ಎಸ್ ಸಂಸ್ಥೆ ಕಾರ್ಯದರ್ಶಿ, SDM ಉಪಾಧ್ಯಕ್ಷ ಡಾ. ಎನ್. ವಜ್ರಕುಮಾರ ದೇಹಾಂತ್ಯ

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಇಲ್ಲಿನ ಜನತಾ ಶಿಕ್ಷಣ ಸಮಿತಿ (JSS) ಸಂಸ್ಥೆ ಕಾರ್ಯದರ್ಶಿ ಹಾಗೂ ಎಸ ಡಿಎಂ ಉಪಾಧ್ಯಕ್ಷ ಡಾ. ಎನ್. ವಜ್ರಕುಮಾರ್ (83) ಅವರು ಶುಕ್ರವಾರ ಬೆಳಗ್ಗೆ ನಿಧನರಾದರು.

ಅವರು ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.ಮೂಲತಃ ಉಡುಪಿ ಜಿಲ್ಲೆಯವರಾಗಿದ್ದ ಅವರು ಧಾರವಾಡದ ಯಾಲಕ್ಕಿ ಶೆಟ್ಟರ ಕಾಲನಿಯ ನಿವಾಸದಲ್ಲಿ ವಾಸವಾಗಿದ್ದರು.

ಉಡುಪಿ ತಾಲೂಕಿನ ಮೂಲ್ಕಿಯಲ್ಲಿ ಪ್ರಾಥಮಿಕ ಶಿಕ್ಷಣ, ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿ ಉಡುಪಿಯ ಮಹಾತ್ಮಾ ಗಾಂಧಿ ಮೆಮೊರಿಯಲ್ ಕಾಲೆಜಿನಲ್ಲಿ ಪದವಿ, ಸೋಲಾಪುರದ ದಯಾನಂದ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

1962ರಿಂದ 1973 ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಉಪನ್ಯಾಸಕರಾಗಿದ್ದ ಅವರು,  ಜೆಎಸ್ ಎಸ್ ಕಲಾ, ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ನಂತರ ಜೆಎಸ್ಎಸ್ ಸಂಸ್ಥೆಯಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು.

ಶಿಸ್ತು, ಸರಳ ಜೀವನ, ಅತ್ಯುತ್ತಮ ಮಾರ್ಗದರ್ಶನ, ಪ್ರಾಮಾಣಿಕ, ದಕ್ಷ ಆಡಳಿತ ದ ಮೂಲಕ ಅವರು ಅಪಾರ ಜನಮೆಚ್ಚುಗೆಗೆ ಪಾತ್ರರಾಗಿದ್ದಲ್ಲದೆ ವಿಶಾಲ ವಿದ್ಯಾರ್ಥಿ ಸಮೂಹದ ಮನಗೆದ್ದಿದ್ದರು.

ಅವರ ನಿಧನದ ಹಿನ್ನೆಲೆಯಲ್ಲಿ ಜೆಎಸ್‌ಎಸ್ ನ ಎಲ್ಲ ಅಂಗ ಸಂಸ್ಥೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಸೋಮವಾರದಿಂದ ಶಾಲೆ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ವಜ್ರಕುಮಾರ್ ಅವರ ಪಾರ್ಥಿವ ಶರೀರವನ್ನು ಬೆಳಿಗ್ಗೆ 8 ರಿಂದ 9.30 ರವರೆಗೆ ಸಾರ್ವಜನಿಕ ದರ್ಶನಕ್ಕಾಗಿ ಜೆಎಸ್ಎಸ್ ಕ್ಯಾಂಪಸ್‌ನಲ್ಲಿ ಇರಿಸಿದ ನಂತರ ಅವರ ಹುಟ್ಟೂರಾದ ಉಡುಪಿ ಜಿಲ್ಲೆಯ ಯರ್ಮಾಳು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ನಟ ರಿತೇಶ ದೇಶಮುಖ ಖರೀದಿಸಿದ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟು ಗೊತ್ತಾ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button