Belagavi NewsBelgaum NewsKannada NewsKarnataka News

*ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ: ಜಾಥಾ, ಬೈಕ್ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರದಲ್ಲಿ ಮಕ್ಕಳ ದಿನಾಚರಣೆಯ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ ಹಾಗೂ ಬೈಕ್ ರ್ಯಾಲಿ ಕಾರ್ಯಕ್ರಮವನ್ನು ಶುಕ್ರವಾರ (ನ.14) ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು,

ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂದೆ ಇವರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಈ ವರ್ಷವು 2025-26 ನೇ ಸಾಲಿನ ರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು “ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Home add -Advt

ಜಾಥಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಆರಂಭವಾಗಿ ಚನ್ನಮ್ಮ ಸರ್ಕಲ್, ಕಾಲೇಜ್ ರೋಡ, ಬೋಗಾರವೇಸ್ ಸರ್ಕಲ್, ಮಾರ್ಗವಾಗಿ ಗೋಗಟೆ ಸರ್ಕಲ್, ಗೋವಾವೆಸ್ ಸರ್ಕಲ್‌ನಲ್ಲಿ ಬೈಕ್ ರ್ಯಾಲಿ ಮುಕ್ತಾಯಗೊಳಿಸಿ ಕೊನೆಯದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸರ್ವರು ಕಾನೂನು ಬದ್ದ ದತ್ತು ಸಂಕಲ್ಪ ಸಂದೇಶ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪರ್ವೀನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಾಂಚನಾ ಅಮಠ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಡಾ.ಜಗದೀಶ ಸರಿಕರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮುರ್ತಿ ಕೆ.ವಿ. ಮಹಿಳಾ ಕಲ್ಯಾಣ ಸಂಸ್ಥೆ ಅಧ್ಯಕ್ಷರಾದ ಎಂ. ಎಸ್. ಚೌಗಲಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯವರು, ಮಕ್ಕಳ ಸಹಾಯವಾಣಿ-1098, ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರ, ಸ್ವಾಮಿ ವಿವೇಕಾನಂದ ದತ್ತು ಸ್ವೀಕರ ಕೇಂದ್ರದ ಸಿಬ್ಬಂದಿಗಳು, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧಿಕ್ಷಕರು ಹಾಗೂ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Back to top button