
ಪ್ರಗತಿವಾಹಿನಿ ಸುದ್ದಿ : ಇಂದು ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಜಾರ್ಖಂಡ್ ನ ಬೊಕರೊ-ರಾಮ್ ಘರ್ ಹೆದ್ದಾರಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.
ಕಾರಿನ ಅತಿ ವೇಗವೇ ಅಪಘಾತಕ್ಕೆ ನೇರ ಕಾರಣ ಎಂದು ಗೊತ್ತಾಗಿದೆ. 8 ಮಂದಿ ಪೈಕಿ 5 ಜನರು ಮೃತಪಟ್ಟಿದ್ದಾರೆ. ಉಳಿದ ಮೂವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ರಕ್ತಸ್ರಾವ ಆಗಿಯೇ ಎಲ್ಲರೂ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ