Kannada NewsKarnataka News

*ಬೈಪಾಸ್ ರಸ್ತೆಯಲ್ಲಿ ಜವರಾಯನ ಅಟ್ಟಹಾಸ: ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಟ್ಯಾಂಕ‌ರ್ ನಡುವೆ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ನಲ್ಲಿ ನಡೆದಿದೆ.

ಮೃತರನ್ನು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ಮೂಲದ ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಎಂದು ಗುರುತಿಸಲಾಗಿದೆ. ಬೈಪಾಸ್ ನಲ್ಲಿ ಕಾರನ್ನು ಯು- ಟರ್ನ್ ತೆಗೆದುಕೊಳ್ಳುವಾಗ ವೇಗವಾಗಿ ಬಂದ ಟ್ಯಾಂಕ‌ರ್ ಡಿಕ್ಕಿ ಹೊಡೆದಿದೆ.

Home add -Advt

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟ್ಯಾಂಕ‌ರ್ ಡಿಕ್ಕಿಗೆ ನಾಲ್ಕು ಜನ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆಗೆ ಸಂಬಂಧಪಟ್ಟಂತೆ ಕುಣಿಗಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button