Kannada NewsNational

*ಜವರಾಯನ ಅಟ್ಟಹಾಸ: ಐದು ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ

ಬಸ್ ಹಾಗೂ ಕಾರು ನಡುವಿನ ಸಂಭವಿಸಿದ ಅಪಘಾತದಲ್ಲಿ 5 ಮಂದಿ ಸಾವನಪ್ಪಿ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿ ಆಗಿಲ್ಲ.

ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಗೊತ್ತಾಗಿದೆ. ಬಸ್ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button