ಬರ್ತ್ ಡೇ ಪಾರ್ಟಿ ಮುಗಿಸಿ ಮನೆಗೆ ತೆರಳುವಾಗ ಜವರಾಯನ ಅಟ್ಟಹಾಸ; ಇಬ್ಬರ ಸಾವು
![](https://pragativahini.com/wp-content/uploads/2024/01/Accident-2-6.jpg)
ಪ್ರಗತಿವಾಹಿನಿ ಸುದ್ದಿ: ಸಂಬಂಧಿಕರ ಬರ್ತ್ ಡೇ ಪಾರ್ಟಿ ಮುಗಿಸಿ ಮನೆಗೆ ಮರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿರುವ ಘಟನೆ ತುಮಕೂರಲ್ಲಿ ನಡೆದಿದೆ.
ಉಮಾ (50), ವಿನೋದ್ (24), ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ತುಮಕೂರು ತಾಲೂಕಿನ ಯಲ್ಲಾಪುರ ಬಳಿ ಘಟನೆ ನಡೆದಿದೆ. ಪಾವಗಡ ಮೂಲದ ಉಮಾ, ಕಳೆದ ಎರಡು ದಿನಗಳ ಹಿಂದೆ ತಂಗಿ ಮನೆಗೆ ಬಂದಿದ್ದರು. ಬುಧವಾರ ಸಂಜೆ ತಂಗಿ ಮಗ ವಿನೋದ್ ಜೊತೆ ಯಲ್ಲಾಪುರದಲ್ಲಿ ಸಂಬಂಧಿಕರೊಬ್ಬರ ಬರ್ತ್ ಡೇ ಪಾರ್ಟಿಗೆ ತೆರಳಿದ್ದರು. ರಾತ್ರಿ ಬರ್ತ್ ಡೇ ಪಾರ್ಟಿಯಲ್ಲಿ ಊಟ ಮುಗಿಸಿಕೊಂಡು ಮನೆಗೆ ಬೈಕ್ ನಲ್ಲಿ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ