*ಪಂಚಮಸಾಲಿ 2ಎ ಮೀಸಲಾತಿಗೆ ಡಿಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿತು.
ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಶುಕ್ರವಾರ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಮನವಿ ಮಾಡಿತು.
‘ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇದರಿಂದ ಸಮುದಾಯ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ’ ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ತಿಳಿಸಿದರು.
ಈ ನಿಯೋಗದಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್, ಪ್ರಸಾದ್ ಅಬ್ಬಯ್ಯ ಹಾಗೂ ಸಮುದಾಯದ ಮುಖಂಡರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ