Life Style

*ರಾಯರ ಮಠದಲ್ಲಿ ಭರತನಾಟ್ಯ ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ: ವಿದುಷಿ ವೈ.ಜಿ. ಶ್ರೀಲತಾ ನಿಕ್ಷಿತ್ ಅವರ ನಿರ್ದೇಶನದಲ್ಲಿ ನಟನ ತರಂಗಿಣಿ ಸಂಗೀತ ಮತ್ತು ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನವೆಂಬರ್ 7, ಗುರುವಾರ ಸಂಜೆ 7-30ಕ್ಕೆ ವಿದುಷಿ ವೈ.ಜಿ. ಶ್ರೀಲತಾ ನಿಕ್ಷಿತ್ ಅವರ ನಿರ್ದೇಶನದಲ್ಲಿ ನಟನ ತರಂಗಿಣಿ ಸಂಗೀತ ಮತ್ತು ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ,11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ,
ಜಯನಗರ 5ನೇ ಬಡಾವಣೆ, ಬೆಂಗಳೂರು-41

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button