Latest

ರಾಜ್ಯಸಭಾ ಚುನಾವಣೆ; ಹೆಚ್ ಡಿ ಕೆ ಜತೆ ಸುರ್ಜೇವಾಲಾ ಚರ್ಚೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇದೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಬಿಜೆಪಿ ಲೆಕ್ಕಾಚಾರ ತಲೆಕೆಳಗೆ ಮಾಡಲು ತಂತ್ರ ರೂಪಿಸುತ್ತಿವೆ.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ತಮ್ಮ ಅಭ್ಯರ್ಥಿಗೆ ಕಾಂಗ್ರೆಸ್ ನಾಯಕರು ಬೆಂಬಲ ನೀಡುವಂತೆ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಸೇರಿ ಜೆಡಿಎಸ್ ನಾಯಕರು ಒತ್ತಡಹೇರುತ್ತಿದ್ದಾರೆ. ಹೀಗಾಗಿ ರಾಜ್ಯಸಭಾ ಚುನಾವಣೆ ರೋಚಕ ಘಟ್ಟಕ್ಕೆ ತಲುಪಿದೆ.

ಕಾಂಗ್ರೆಸ್ ರಾಜ್ಯ ನಾಯಕರು ತಾವು ಹಲವು ಬಾರಿ ಜೆಡಿಎಸ್ ಗೆ ಬೆಂಬಲ ನೀಡಿದ್ದು, ಈಬಾರಿ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲಿಸಲಿ. ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ದರೆ ಜೆಡಿಎಸ್ ನವರು ನಮಗೆ ಬೆಂಬಲ ನೀಡಬೇಕು ಎಂದು ಹೇಳಿದ್ದಾರೆ. ಒಟ್ಟಾರೆ ದಳಪತಿಗಳೇ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ರಾಜ್ಯಸಭೆ ನಂಬರ್ ಗೇಮ್ ನಲ್ಲಿ ಜೂನ್ 10ರಂದು ಏನೆಲ್ಲ ನಡೆಯಲಿದೆ ಕಾದುನೋಡಬೇಕಿದೆ.
ವಿಧಾನಸಭಾ ಚುನಾವಣೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ

Home add -Advt

Related Articles

Back to top button