Election NewsKannada NewsKarnataka NewsPolitics

*ವಿ.ಪ ಚುನಾವಣೆಯಲ್ಲಿ ಜೆಡಿಎಸ್ 2 ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ : ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೆ.ಡಿ.ಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ. 

ಇಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡದ ಅವರು, ಜೆಡಿಎಸ್ ಗೆ ಎರಡು ಸ್ಥಾನ ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾ‌ನ ಗೆಲ್ಲುತ್ತೇವೆ. ಕಾಂಗ್ರೆಸ್ ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button