Election NewsKannada NewsKarnataka NewsPolitics
*ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ವಿಧಾನಪರಿಷತ್ ಚುನಾವಣೆಯಲ್ಲಿಯೂ ದೋಸ್ತಿ ಮುಂದುವರಿಸುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರು ಒಟ್ಟಾಗಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಇದು ವಿಧಾನಪರಿಷತ್ ಚುನಾವಣೆಯಲ್ಲಿ ಮುಂದುವರಿಸಬೇಕು. ಇದರಿಂದ ಕಾಂಗ್ರೆಸ್ ಮಣಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು ಎಂದು ಹೇಳಲಾಗಿದೆ.