Election NewsKannada NewsKarnataka NewsPolitics

*ವಿಧಾನಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ*  

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ದೋಸ್ತಿ ಮುಂದುವರಿಸುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.‌

Home add -Advt

ಜೆಡಿಎಸ್‌ ಕಚೇರಿಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರು ಒಟ್ಟಾಗಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಇದು ವಿಧಾನಪರಿಷತ್‌ ಚುನಾವಣೆಯಲ್ಲಿ ಮುಂದುವರಿಸಬೇಕು. ಇದರಿಂದ ಕಾಂಗ್ರೆಸ್ ಮಣಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು ಎಂದು ಹೇಳಲಾಗಿದೆ.

Related Articles

Back to top button