Election NewsKannada NewsKarnataka NewsLatestPolitics

 ಜೆಡಿಎಸ್-ಬಿಜೆಪಿ ಮೈತ್ರಿ; ಆಗ ದೇವೇಗೌಡ್ರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದರು : ಹೆಚ್.ಡಿ.ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೈತ್ರಿಯಲ್ಲಿ ಏನೇ ಸಮಸ್ಯೆ ಇದ್ದರೂ ನಮ್ಮ ಗಮನಕ್ಕೆ ತನ್ನಿ. ಅಧಿಕಾರಕ್ಕಾಗಿ ನಾವು ಮೈತ್ರಿ ಮಾಡಿಕೊಂಡಿಲ್ಲ. ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಈ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶಕ್ಕೆ ಮಾದರಿಯಾಗುವ ಸರ್ಕಾರ 2006 ರಲ್ಲಿ ನಾವು ನೀಡಿದ್ದೇವೆ. ಯಡಿಯೂರಪ್ಪನವರಿಗೆ ಉತ್ತಮ ಸಹಕಾರ ಕೊಟ್ಟಿದ್ದೇವೆ. 2006 ರ 20 ತಿಂಗಳ ಸರ್ಕಾರ ಜನರ ಮನಸ್ಸಿನಲ್ಲಿದೆ‌.‌ ಕುಮಾರಸ್ವಾಮಿ ಅಂತ ಈ ರಾಜ್ಯದಲ್ಲಿ ಗುರುತಿಸಿಲು ಸಾಧ್ಯ ಆಗಿದ್ದು 2006ರಲ್ಲಿ ಯಡಿಯೂರಪ್ಪ ಜೊತೆ ಸೇರಿ ಸರ್ಕಾರ ರಚನೆ ಮಾಡಿದಾಗ, ಆದ್ರೆ ಅನಿವಾರ್ಯ ಕಾರಣಗಳಿಂದ ಮೈತ್ರಿ ಸರ್ಕಾರ ಮುಂದುವರೆಯಲು ಸಾಧ್ಯ ಆಗಿಲ್ಲ. ಆಗ ದೇವೇಗೌಡ್ರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದರು ಎಂದು ಹೇಳಿದರು.

ಕಾಂಗ್ರೆಸ್ ಬದಲು ಬಿಜೆಪಿ ಜೊತೆ 2018 ರಲ್ಲಿ ಮೈತ್ರಿ ಮಾಡಿಕೊಂಡಿದ್ರೆ ಈಗ ಮತ್ತೆ ನಮ್ಮ ಸರ್ಕಾರವೇ ಬರುತ್ತಿತ್ತು. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಣ್ಣಪುಟ್ಟ ಗೊಂದಲ ಇರುತ್ತೆ. ಅದೆಲ್ಲವೂ ಸರಿ ಮಾಡಿಕೊಂಡು ಹೋಗೋಣ.‌ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.‌

ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ರಾಜ್ಯ ಬಿಜೆಪಿ ಚಿನಾವಣಾ ಉಸ್ತುವಾರಿ ರಾಧಾ ಮೋಹನ ಅಗರವಾಲ್ ಅವರು ಪಾಲ್ಗೊಂಡಿದ್ದರು.

Related Articles

Back to top button