ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ರವೀಂದ್ರಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ರವೀಂದ್ರಪ್ಪ ಮನೆ ಮೇಲೆ ಇತ್ತೀಚೆಗೆ ನಡೆದ ಎರಡನೇ ಐಟಿ ದಾಳಿ ಇದಾಗಿದೆ. ಏಪ್ರಿಲ್ 28ರಂದು ಕೂಡ ರವೀಮ್ದ್ರಪ್ಪ ನಿವಾಸದ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ