Latest

ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಐವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಟಂಟಂ ವಾಹನ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಅಯ್ಯಮ್ಮ, ಶರಣಮ್ಮ, ಕಾಸಂಬಿ, ಭೀಮಾಬಾಯಿ ಹಾಗೂ ದೇವಿಂದ್ರಮ್ಮ ಎಂದು ಗುರುತಿಸಲಾಗಿದೆ.

Home add -Advt

ಟಂಟಂ ವಾಹನದಲ್ಲಿ ಜಮೀನು ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಟ್ಯಾಂಕರ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button