Kannada NewsKarnataka NewsLatestPolitics
*ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಮುಖಂಡರಾದ ಮಾಜಿ ಸಂಸದ, ಮಾಜಿ ಶಾಸಕ ಆಯನೂರು ಮಂಜುನಾಥ್ ಹಾಗೂ ಶಿಕಾರಿಪುರದ ನಾಗರಾಜ್ ಗೌಡ ಅಧಿಕೃತವಾಗಿ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಡಿ.ಕೆ.ಶಿವಕುಮಾರ್ ಇಬ್ಬರನ್ನು ಪಕ್ಷಕ್ಕೆ ಸ್ವಾಗತಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು.




