
ಪ್ರಗತಿವಾಹಿನಿ ಸುದ್ದಿ; ಮೈಸೂರು: ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಪುತ್ರ 32 ವರ್ಷದ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
ಇಲ್ಲಿನ ಮರಟಿಕ್ಯಾತನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ಪ್ರದೀಪ್ ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಕೂಡ ಆಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ




